ಕೇರಳ ಸ್ಟೋರಿ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

ಲಕ್ನೋ: ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಮಂಗಳವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಯುಪಿ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, “ದಿ ಕೇರಳ ಸ್ಟೋರಿ’ ಅನ್ನು ತೆರಿಗೆ ಮುಕ್ತಗೊಳಿಸುವುದು ಉತ್ತಮ ನಿರ್ಧಾರವಾಗಿದೆ. ಉತ್ತರ ಪ್ರದೇಶದ ಜನರು ಈ ಚಿತ್ರವನ್ನು ನೋಡಬೇಕು ಮತ್ತು ನಮ್ಮ ಸಹೋದರಿಯರು ಹೇಗೆ ತೊಂದರೆ ಅನುಭವಿಸಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ನಾವು ಕೂಡ ಹೋಗಿ ಚಿತ್ರ ನೋಡುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಪಶ್ಚಿಮ ಬಂಗಾಳದ ಜನರು ಚಿತ್ರ ಮೇಲಿನ ನಿಷೇಧವನ್ನು ಒಪ್ಪಿಕೊಳ್ಳಲಾರರು ಎಂದು ಹೇಳಿದ್ದಾರೆ.

ಸುದೀಪ್ತೋ ಸೇನ್ ಅವರ ನಿರ್ದೇಶನದ ‘ದಿ ಕೇರಳ ಸ್ಟೋರಿ’, ಇಸ್ಲಾಂಗೆ ಮತಾಂತರಗೊಂಡು ಭಯೋತ್ಪಾದಕ ಸಂಘಟನೆಗೆ ಸೇರಿ ಅನುಭವಿಸುವ ತೊಂದರೆಯ ಕುರಿತು ಚಿತ್ರ ಕಥಾಹಂದರ ಹೊಂದಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಬೆದರಿಕೆ” ಯನ್ನು ಉಲ್ಲೇಖಿಸಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಈಗಾಗಲೇ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದೆ.

Umesha HS

Recent Posts

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

2 mins ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

16 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

30 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

8 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

8 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

9 hours ago