News Karnataka Kannada
Monday, April 29 2024
ಉತ್ತರ ಪ್ರದೇಶ

ಹಿಂದೂ ವಿದ್ಯಾರ್ಥಿಯಿಂದ ಮುಸ್ಲಿಂ ವಿದ್ಯಾರ್ಥಿಯ ಕಪಾಳಕ್ಕೆ ಹೊಡಿಸಿದ ಶಿಕ್ಷಕಿ: ವ್ಯಾಪಕ ಆಕ್ರೋಶ

Teacher slaps Muslim student by Hindu student, sparks outrage
Photo Credit : IANS

ಉತ್ತರಪ್ರದೇಶ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಲು ಹಿಂದೂ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ತಿಳಿಸಿದ ಘಟನೆ ಉತ್ತರಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ. ಈ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಯುಪಿಯ ಮುಜಾಫರ್‌ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕರೊಬ್ಬರು ಹಿಂದೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವ ವಿಡಿಯೋ ಶುಕ್ರವಾರ ವೈರಲ್ ಆಗಿದ್ದು, ಘಟನೆಯ ಕುರಿತು ಮುಜಫರ್‌ನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ವೀಡಿಯೊದಲ್ಲಿ ಶಿಕ್ಷಕಿ ತ್ರಿಪ್ತಾ ತ್ಯಾಗಿ, ಹಿಂದೂ ವಿದ್ಯಾರ್ಥಿಗಳು ತರಗತಿಯ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಲು ಸರದಿಯಲ್ಲಿ ಬರಲು ತಿಳಿಸಿದ್ದಾರೆ. “ನೀವು ಅವನನ್ನು ಏಕೆ ಬಲವಾಗಿ ಹೊಡೆಯುತ್ತಿಲ್ಲ” ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದಾಳೆ.

ಈ ವೇಳೆ ವಿದ್ಯಾರ್ಥಿಯು ಜೋರಾಗಿ ಅಳುತ್ತಿದ್ದರೂ ಸಹ ಶಿಕ್ಷಕರು ವಿದ್ಯಾರ್ಥಿಗೆ ಥಳಿಸಲು ಹೇಳುತ್ತಾರೆ. ಪ್ರಕರಣದ ತನಿಖೆಯನ್ನು ಮನ್ಸೂರ್‌ಪುರದ ಠಾಣಾಧಿಕಾರಿಗೆ ಮುಜಫರ್‌ನಗರ ಪೊಲೀಸರು ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು