ಸಂತ ಕಬೀರ್ ನಗರ, ಸೆ.20: ಸಂತ ಕಬೀರ್ ನಗರದ ರಾಂಪುರ ಗ್ರಾಮದಲ್ಲಿ ಸೋಮವಾರ ಸಂಜೆ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕ ಮತ್ತು 15 ವರ್ಷದ ಬಾಲಕಿಯ ಶವಗಳು ಪತ್ತೆಯಾಗಿವೆ.
ಇಬ್ಬರನ್ನು ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬದ ಸದಸ್ಯರು ಹೇಳಿದ್ದಾರೆ. ವರದಿಗಳ ಪ್ರಕಾರ, ಇಬ್ಬರೂ ಸಂಬಂಧದಲ್ಲಿದ್ದರು. ಘಟನಾ ಸ್ಥಳದಿಂದ ಅವರ ಸೆಲ್ ಫೋನ್ ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಂತ ಕಬೀರ್ ನಗರ ಎಸ್ಪಿ ಸೋನಮ್ ಕುಮಾರ್ ತಿಳಿಸಿದ್ದಾರೆ.