ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಉತ್ತರಾಖಂಡ: ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ.

ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ ಚಾರ್​ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ.

ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ ಒಟ್ಟು ನಾಲ್ಕು ಪವಿತ್ರ ಯಾತ್ರೆಗಳು. ಈ ಪವಿತ್ರ ಸ್ಥಳಗಳ ಬಾಗಿಲುಗಳು ಅಕ್ಷಯ ತೃತೀಯದಂದು ತೆರೆಯಲಾಗುತ್ತದೆ. ಏಪ್ರಿಲ್​ 15ರಿಂದ ಪ್ರಾರಂಭವಾದ ಆನ್​ಲೈನ್ ನೋಂದಣಿ ಪ್ರಕ್ರಿಯೆಯನ್ನು ಜೂನ್ ತಿಂಗಳ ಕೊನೆಯವರೆಗೆ ವಿಸ್ತರಿಸಲಾಗಿದೆ.

ನೋಂದಣಿ ಇಲ್ಲದೆ ಯಾತ್ರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಹರಿದ್ವಾರ ಮತ್ತು ಋಷಿಕೇಶದಲ್ಲಿ ಮೇ8ರಿಂದ ಆಫ್​ಲೈನ್​ ನೋಂದಣಿ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆಫ್​ಲೈನ್​ ನೋಂದಣಿಯೂ ಯಾತ್ರಿಕರ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಇದೆ.

ಕೇದಾರನಾಥ ಪ್ರಾಮುಖ್ಯತೆ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಕೇದಾರನಾಥ ಶಿವನ ಪವಿತ್ರ ಸ್ಥಳವಾಗಿದೆ. ಇಲ್ಲಿಗೆ ಪ್ರತಿ ವರ್ಷ ಲಕ್ಷಗಟ್ಟಲೆ ಜನರು ದರ್ಶನಕ್ಕೆ ಬರುತ್ತಾರೆ. ಶಿವನ ಹನ್ನೆರಡು ಜ್ಯೋತಿರ್ಲಿಂಗಗಳು ಮತ್ತು ಪಂಚ ಕೇದಾರಗಳಲ್ಲಿ ಕೇದಾರನಾಥವನ್ನು ಸಹ ಪರಿಗಣಿಸಲಾಗಿದೆ. ಕೇದಾರನಾಥ ದೇವಾಲಯದಲ್ಲಿ ಸ್ಥಾಪಿಸಲಾದ ಶಿವಲಿಂಗವು ಸ್ವಯಂಪೂರ್ಣವಾಗಿದೆ. ಇದರಿಂದಾಗಿ ದೇವಾಲಯದ ಮಹತ್ವ ಹೆಚ್ಚುತ್ತಿದೆ.

ಆನ್‌ಲೈನ್‌ನಲ್ಲಿ ನೋಂದಾವಣೆ : ನೋಂದಣಿ/ಲಾಗ್-ಇನ್ ಬಟನ್ ಕ್ಲಿಕ್ ಮಾಡಿ. ಹೊಸ ವಿಂಡೋದಲ್ಲಿ ಫಾರ್ಮ್‌ನಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ. ಒದಗಿಸಿದ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಅನ್ನು ಬಳಸಿಕೊಂಡು OTP ಪರಿಶೀಲನೆಯ ಮೂಲಕ ನಿಮ್ಮ ಗುರುತನ್ನು ಪರಿಶೀಲಿಸಿ. ಪರಿಶೀಲನೆಯ ನಂತರ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ ಲಾಗ್ ಇನ್ ಮಾಡಿ.

ನಿಮ್ಮ ವೈಯಕ್ತೀಕರಿಸಿದ ಡ್ಯಾಶ್‌ಬೋರ್ಡ್ ಅನ್ನು ಪ್ರವೇಶಿಸಿ ಮತ್ತು ಯಾತ್ರಿಕರು ಅಥವಾ ಪ್ರವಾಸಿಗರನ್ನು ಸೇರಿಸಿ/ನಿರ್ವಹಿಸು ಬಟನ್ ಅನ್ನು ಕ್ಲಿಕ್ ಮಾಡಿ. ಪ್ರಕಾರ, ಹೆಸರು, ದಿನಾಂಕಗಳು ಮತ್ತು ಪ್ರವಾಸಿಗರ ಸಂಖ್ಯೆಯಂತಹ ಅಗತ್ಯವಿರುವ ಎಲ್ಲಾ ಪ್ರವಾಸದ ವಿವರಗಳನ್ನು ಒದಗಿಸಿ. ಬೇಕಾದ ಪುರಾವೆಗಳನ್ನು ನಮೂದಿಸಿ. ಯಶಸ್ವಿ ನೋಂದಣಿಯ ನಂತರ, ನಿಮ್ಮ ಮೊಬೈಲ್ ಸಂಖ್ಯೆಯನ್ನು ದೃಢೀಕರಿಸುವ SMS ಮೂಲಕ ನೀವು ಅನನ್ಯ ನೋಂದಣಿ ಸಂಖ್ಯೆಯನ್ನು (URN) ಸ್ವೀಕರಿಸುತ್ತೀರಿ. ನಿಮ್ಮ ಪ್ರಯಾಣದ ಸಮಯದಲ್ಲಿ ಅಗತ್ಯವಿರುವ ಚಾರ್‌ ಧಾಮ್‌ ಯಾತ್ರೆಗಾಗಿ ನೋಂದಣಿ ಪತ್ರವನ್ನು ಡೌನ್‌ಲೋಡ್ ಮಾಡಿ ಕೊಳ್ಳಬಹುದು.

Chaitra Kulal

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

6 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

26 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

47 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

55 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago