News Karnataka Kannada
Wednesday, May 01 2024
ಉತ್ತರ ಪ್ರದೇಶ

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವು

ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಮುಜಾಫರ್‌ನಗರದಲ್ಲಿ ಭಾನುವಾರ ನಡೆದಿದೆ.
Photo Credit : NewsKarnataka

ಉತ್ತರ ಪ್ರದೇಶ:  ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಮುಜಾಫರ್‌ನಗರದಲ್ಲಿ ಭಾನುವಾರ ನಡೆದಿದೆ.

ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆಯಲಾಯಿತು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯನ್ನು ಗಮನಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಅವರು ಅಧಿಕಾರಿಗಳು ಮತ್ತು ರಕ್ಷಣಾ ತಂಡಕ್ಕೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು