News Karnataka Kannada
Thursday, May 09 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ ನಾಲ್ವರು ಸಾವು

Uttar Pradesh: Four killed as boat capsizes in Yamuna river
Photo Credit : Twitter

ಬಂದಾ: ಯಮುನಾ ನದಿಯಲ್ಲಿ ದೋಣಿ ಮುಳುಗಿ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಗುರುವಾರ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ನಡೆದಿದೆ.

ಬೋಟ್ ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಯಲ್ಲಿ 30 ರಿಂದ 35 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಅವರು ತಿಳಿಸಿದ್ದಾರೆ.

ಏಳರಿಂದ ಎಂಟು ಮಂದಿ ಸುರಕ್ಷಿತವಾಗಿ ಈಜಿ ದಡ ಸೇರಿದ್ದು, ಇನ್ನೂ ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೆಚ್ಚುವರಿ ಎಸ್ಪಿ ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ. ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು