ಮಥುರಾ: ಮಥುರಾ ಜಿಲ್ಲೆಯ ಕೋಸಿಕಲನ್ ಪಟ್ಟಣದಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಗೇ ಬೆಂಕಿ ಹಚ್ಚಿ ಕೊಂದಿರುವ ಘಟನೆ ಸೋಮವಾರ ನಡೆದಿದೆ.
ವಿವಾಹಿತ ಮಹಿಳೆ ರೇಖಾ ಪರ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು. ವಿಷಯ ತಿಳಿದ ಆಕೆಯ ಪತಿ ಚಮನ್ ಪ್ರಕಾಶ್ ಅದನ್ನು ವಿರೋಧಿಸಿದರು. ಈ ವಿಷಯವಾಗಿ ದಂಪತಿ ನಡುವೆ ವಾಗ್ವಾದ ನಡೆದಿತ್ತು. ಸೋಮವಾರ ಸಂಜೆ ಚಮನ್ ಗಾಢ ನಿದ್ದೆಯಲ್ಲಿದ್ದಾಗ ರೇಖಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಕಿರುಚಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದು ಬೆಂಕಿ ನಂದಿಸಿ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ತೀವ್ರ ಸುಟ್ಟ ಗಾಯಗಳಾಗಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರೇಖಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.