News Karnataka Kannada
Monday, May 06 2024
ಉತ್ತರ ಪ್ರದೇಶ

ನಗರಸಭೆ ಸದಸ್ಯರ ತಳ್ಳಾಟ: ವಿಡಿಯೋ ವೈರಲ್‌

ನಾವು ಸಾಮಾನ್ಯವಾಗಿ ವಿಧಾನಸಭೆ ಕಲಾಪಗಳಲ್ಲಿ ಅಶಿಸ್ತಿನಿ ವರ್ತನೆ ವಿಡಿಯೋಗಳನ್ನು ನೋಡುತ್ತಿರುತ್ತೇವೆ. ಆದರೆ ಉತ್ತರಪ್ರದೇಶದಲ್ಲಿ ನಗರಸಭೆಯ ಸದಸ್ಯರುಗಳ ನಡುವೆ ಭಾರೀ ಗುದ್ದಾಟ-ತಳ್ಳಾಟ ನಡೆದಿದೆ. ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.
Photo Credit : News Kannada

ಲಕ್ನೋ: ನಾವು ಸಾಮಾನ್ಯವಾಗಿ ವಿಧಾನಸಭೆ ಕಲಾಪಗಳಲ್ಲಿ ಅಶಿಸ್ತಿನ ವರ್ತನೆ ವಿಡಿಯೋಗಳನ್ನು ನೋಡುತ್ತಿರುತ್ತೇವೆ. ಆದರೆ ಉತ್ತರಪ್ರದೇಶದಲ್ಲಿ ನಗರಸಭೆಯ ಸದಸ್ಯರುಗಳ ನಡುವೆ ಭಾರೀ ಗುದ್ದಾಟ-ತಳ್ಳಾಟ ನಡೆದಿದೆ. ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಶಾಮ್ಲಿ ಪುರಸಭೆಯ ಆಡಳಿತ ಮಂಡಳಿ ಸಭೆಯಲ್ಲಿ ಪುರಸಭೆ ಅಧ್ಯಕ್ಷ ಅರವಿಂದ ಸಂಗಲ್ ಮತ್ತು ಶಾಸಕ ಪ್ರಸನ್ನ ಚೌಧರಿ ಉಪಸ್ಥಿತರಿದ್ದರು. ಸಭೆಯಲ್ಲಿ 4 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಆರಂಭವಾಯಿತು. ಈ ವೇಳೆ ಅರವಿಂದ ಸಂಗಲ್ ಮತ್ತು ಪ್ರಸನ್ನ ಚೌಧರಿ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾತಿನ ಚಕಮಕಿಯಿಂದ ಪ್ರಾರಂಭವಾದ ಜಗಳ ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ತಿರುಗಿತು.

ಇಬ್ಬರು ಸದಸ್ಯರು ಪರಸ್ಪರ ಗುದ್ದಾಟ ನಡೆಸುವುದರೊಂದಿಗೆ ನಗರ ಪಾಲಿಕೆ ಆಡಳಿತ ಮಂಡಳಿ ಸಭೆಯು ಸಂಪೂರ್ಣ ಕುಸ್ತಿ ಅಖಾಡವಾಯಿತು. ಪೊಲೀಸರು ಮತ್ತು ಹಿರಿಯ ಮುಖಂಡರ ಎದುರೇ ಇಡೀ ಘಟನೆ ನಡೆದಿದೆ. ಇನ್ನು ಇದರ ವೀಡಿಯೋವನ್ನು ಸಭೆಯಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸದ್ಯ ಈ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.‌

ಇತ್ತ ವೈರಲ್‌ ವೀಡಿಯೋವನ್ನು ಗಮನಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು (BJP) ತೀವ್ರ ತರಾಟೆಗೆ ತೆಗೆದುಕೊಂಡರು.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಹಂಚಿಕೊಂಡು, ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿದ್ದಾಗ ಪರಿಶೀಲನಾ ಸಭೆಯಲ್ಲಿ ಇನ್ನೇನು ಆಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಇದರಿಂದಾಗಿ ಶಾಮ್ಲಿಯಲ್ಲಿ ನಡೆದ ಕೌನ್ಸಿಲರ್‌ಗಳ ಸಭೆಯಲ್ಲಿ ಪರಸ್ಪರ ದೈಹಿಕ ಹಲ್ಲೆಗಳು ನಡೆದಿವೆ ಎಂದಿದ್ದಾರೆ. ಒಟ್ಟಿನಲ್ಲಿ ನಿಮ್ಮ ಸ್ವಂತ ಭದ್ರತೆಯನ್ನು ಏರ್ಪಡಿಸಿದ ನಂತರ ಪರಿಶೀಲನಾ ಸಭೆಗೆ ಬನ್ನಿ ಎಂಬುದು ಬಿಜೆಪಿ ಆಡಳಿತದ ಪಾಠವಾಗಿದೆ ಎಂದು ಅವರು ಗರಂ ಆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು