News Karnataka Kannada
Saturday, May 04 2024
ಉತ್ತರ ಪ್ರದೇಶ

ಗೋರಖ್ಪುರದಲ್ಲಿ ತ್ರಿವಳಿ ಕೊಲೆ ಪ್ರಕರಣ: ಮಹಿಳೆಯ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay

ಗೋರಖ್ಪುರ: ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಮಲಮಕ್ಕಳನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಸಹಬ್ಗಂಜ್ ನಲ್ಲಿ ನಡೆದಿದೆ.

ಆರೋಪಿ ಮಹಿಳೆಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.

ವರದಿಗಳ ಪ್ರಕಾರ, 40 ವರ್ಷದ ಅವಧೇಶ್ ಗುಪ್ತಾ ತನ್ನ ಮೊದಲ ಹೆಂಡತಿಯ ಮರಣದ ನಂತರ ಮರುಮದುವೆಯಾಗಿದ್ದರು,  ಅವರಿಗೆ ಆರ್ಯನ್ ಮತ್ತು ಪಿಹು ಎಂಬ ಇಬ್ಬರು ಗಂಡು ಮಕ್ಕಳಿದ್ದರು.

ಅವರ ಎರಡನೇ ಪತ್ನಿ ನೀಲಂ ಸಂತ ಕಬೀರ್ ನಗರದವರಾಗಿದ್ದು, ಅವರಿಗೆ ಪುತ್ರಿಯಿದ್ದಾಳೆ.

ಮೂಲಗಳ ಪ್ರಕಾರ, ನೀಲಂ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಮತ್ತು ತನ್ನ ಪತಿ ಮತ್ತು ಮಲಮಕ್ಕಳನ್ನು ತೊಡೆದುಹಾಕಲು ಬಯಸಿದ್ದಳು.

ಅಪರಾಧ ಮಾಡಿದ ನಂತರ, ಕೆಲವು ಜನರು ತನ್ನ ಪತಿ ಮತ್ತು ಮಲಮಕ್ಕಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ನೀಲಂ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಆಕೆಯ ಮನೆಗೆ ತಲುಪಿದಾಗ ಅವಧೇಶ್ ಮತ್ತು ಇಬ್ಬರು ಗಂಡು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದರು. ಪೊಲೀಸರು ಮೂವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವಧೇಶ್ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಅವಧೇಶ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ನೀಲಂನನ್ನು ಬಂಧಿಸಲಾಗಿದೆ ಎಂದು ಉತ್ತರ ಎಸ್ಪಿ ಮನೋಜ್ ಅವಸ್ಥಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು