ಉತ್ತರಾಖಂಡ: ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ಮಾಹಿತಿ ನೀಡಿದೆ.
NCS ಪ್ರಕಾರ, ಭೂಕಂಪದ ಕಂಪನಗಳು ಪಿಥೋರಗಢ್ನಿಂದ ಈಶಾನ್ಯಕ್ಕೆ 20 ಕಿಲೋಮೀಟರ್ಗಳಲ್ಲಿ ಐದು ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಭೂಕಂಪದಿಂದಾಗಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎನ್ನಲಾಗಿದೆ.