News Karnataka Kannada
Friday, May 17 2024
ಉತ್ತರಖಂಡ

ಉತ್ತರಾಖಂಡದ ಬಿಜೆಪಿ ಶಾಸಕ ಹರಬಂಸ್ ಕಪೂರ್ ನಿಧನ

Photo Credit :

ಡೆಹ್ರಾಡೂನ್ : ಉತ್ತರಾಖಂಡದ ಬಿಜೆಪಿ ಶಾಸಕ ಹಾಗೂ ಮಾಜಿ ಸ್ಪೀಕರ್ ಹರಬಂಸ್ ಕಪೂರ್ ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಎಂಟು ಬಾರಿ ಶಾಸಕರಾಗಿದ್ದ ಕಪೂರ್, ಉತ್ತರಾಖಂಡದ ವಿಧಾನಸಭೆಯ ಹಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.  ಅವರು ಡೆಹ್ರಾಡೂನ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಹರಬಂಸ್ ಕಪೂರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ‘ಉತ್ತರಾಖಂಡದ ತಮ್ಮ ಪಕ್ಷದ ಸಹೋದ್ಯೋಗಿ ಹರಬಂಸ್ ಕಪೂರ್ ಅವರ ನಿಧನದಿಂದ ದುಃಖವಾಗಿದೆ. ಹಿರಿಯ ಶಾಸಕ ಹಾಗೂ ಆಡಳಿತಗಾರ ಕಪೂರ್ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜ ಕಲ್ಯಾಣಕ್ಕಾಗಿ ನೀಡಿದ ಕೊಡುಗೆಗಳಿಗಾಗಿ ಸ್ಮರಿಸಲಾಗುವುದು. ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ’ ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಪೂರ್ ನಿವಾಸಕ್ಕೆ ಭೇಟಿ ನೀಡಿ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.

‘ವಿಧಾನಸಭಾ ಚುನಾವಣೆಯಲ್ಲಿ ಎಂಟು ಬಾರಿ ಗೆದ್ದು ಬಂದಿರುವುದು ಅವರ ಜನಪ್ರಿಯತೆಯನ್ನು ಸಾಬೀತುಪಡಿಸುತ್ತದೆ. ಅಲ್ಲದೆ ಯಾವಾಗಲೂ ಕ್ಷೇತ್ರದ ಅಭಿವೃದ್ಧಿಗಾಗಿ ದನಿಯಾಗಿದ್ದರು’ ಎಂದು ಕಪೂರ್ ಅವರನ್ನು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು