ಡೆಹ್ರಾಡೂನ್ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಉತ್ತರಾಖಂಡದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಡೆಹ್ರಾಡೂನ್ನಲ್ಲಿರುವ ಸಿಎಂ ನಿವಾಸದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭೇಟಿಯಾದರು.
ಭೇಟಿಯ ನಂತರ, ಅಕ್ಷಯ್ ಕುಮಾರ್ ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಧಾಮಿ ಹೇಳಿದ್ದಾರೆ. ನಾವು ಅಕ್ಷಯ್ ಕುಮಾರ್ ಅವರಿಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದ್ದೆವು. ನಮ್ಮ ಈ ಕೋರಿಕೆಗೆ ಅಕ್ಷಯ್ ಕುಮಾರ್ ಒಪ್ಪಿಕೊಂಡಿದ್ದಾರೆ. ಉತ್ತರಾಖಂಡ್ ನ ಬ್ರಾಂಡ್ ಅಂಬಾಸಿಡರ್ ಆಗಿಯೂ ಕೆಲಸ ಮಾಡುತ್ತಾರೆ ಎಂದು ಟ್ವೀಟ್ ಮೂಲಕ ಧಾಮಿ ತಿಳಿಸಿದ್ದಾರೆ.