ಉತ್ತರಖಂಡ

ಕೇದಾರನಾಥದಲ್ಲಿ ಕಸ ಶೇಖರಣೆಯಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ

ಕೇದಾರನಾಥ: ಚಾರ್‌ಧಾಮ್ ಯಾತ್ರೆಯ ಅಂಗವಾಗಿ ಕೇದಾರನಾಥದಲ್ಲಿ ಕಸ ಶೇಖರಣೆಯಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಪವಿತ್ರ ಯಾತ್ರಾಸ್ಥಳದಲ್ಲಿ ಹೀಗೆ ಕಸ ಹಾಕುವುದು ಅನುಚಿತ ಎಂದರು.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ‘ಮನ್ ಕಿ ಬಾತ್’ ಅಂಗವಾಗಿ ರೇಡಿಯೊದಲ್ಲಿ ಮಾತನಾಡಿ, ಉತ್ತರಾಖಂಡದ ಕೇದಾರನಾಥ ಪ್ರವಾಸದುದ್ದಕ್ಕೂ ತ್ಯಾಜ್ಯ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. “ಪ್ರಸ್ತುತ ದೇಶದಲ್ಲಿ ಪವಿತ್ರ ಚಾರ್‌ಧಾಮ್ ಯಾತ್ರೆ ನಡೆಯುತ್ತಿದೆ. ಈ ಯಾತ್ರೆಯ ಭಾಗವಾಗಿ ಪ್ರತಿದಿನ ಸಾವಿರಾರು ಭಕ್ತರು ಕೇದಾರನಾಥಕ್ಕೆ ಭೇಟಿ ನೀಡಿ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ.

ಆದರೆ, ಅನೇಕ ಪ್ರಯಾಣಿಕರು ದಾರಿಯುದ್ದಕ್ಕೂ ತ್ಯಾಜ್ಯ ಮತ್ತು ಕಸವನ್ನು ಎಲ್ಲೆಂದರಲ್ಲಿ ಹಾಕಿ ಗಲೀಜು ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದು, ಅಭಾಸ ವ್ಯಕ್ತವಾಗುತ್ತಿದೆ.

ಆಧ್ಯಾತ್ಮಿಕ ಸ್ಥಳಗಳಲ್ಲಿ ಇಂತಹ ಅಧ್ವಾನಗಳನ್ನು ನೋಡುವುದು ಸರಿಯಲ್ಲ. ಕೆಲವು ಭಕ್ತರು ಈ ಕಸದ ಜಾಗಗಳನ್ನು ಸ್ವಚ್ಛಗೊಳಿಸುತ್ತಿದ್ದರೆ, ಇನ್ನೂ ಕೆಲ ಭಕ್ತರು ತಾವು ಇರುವ ಸ್ಥಳ ಸ್ವಚ್ಛವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ತಿಳಿಸಿದರು.

Sneha Gowda

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

12 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

39 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

49 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

60 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago