ಡೆಹ್ರಾಡೂನ್ : ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದಗಳು, ರಾಮಾಯಣ ಹಾಗೂ ಗೀತೆಯನ್ನು (ಭಗವದ್ಗೀತೆ) ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.
ಉತ್ತರಾಖಂಡದ ಇತಿಹಾಸ ಮತ್ತು ಭೂಗೋಳದ ಕುರಿತು ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದಿದ್ದಾರೆ. ನೂತನ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಪಠ್ಯಕ್ರಮವು ಭಾರತದ ಇತಿಹಾಸ ಮತ್ತು ಪರಂಪರೆಯನ್ನು ಆಧರಿಸಿರಬೇಕು. ವೇದ ಪುರಾಣ ಹಾಗೂ ಗೀತೆಯ ಜೊತೆಗೆ ಸ್ಥಳೀಯ ಭಾಷೆಗಳಿಗೂ ಪ್ರೋತ್ಸಾಹಿಸಬೇಕು.
ನೂತನ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿರುವ ಮೊದಲ ರಾಜ್ಯ ಉತ್ತರಾಖಂಡ. ‘ಶೀಘ್ರದಲ್ಲೇ ಹೊಸ ಪಠ್ಯಕ್ರಮವನ್ನು ಸಿದ್ಧಪಡಿಸಲಾಗುತ್ತದೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿ ಅಡಿಯಲ್ಲಿನ ವ್ಯವಸ್ಥೆಗೆ ಅನುಮೋದನೆ ಪಡೆಯಲಾಗುತ್ತದೆ’ ಎಂದು ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.
ಉತ್ತರಾಖಂಡ ಹೋರಾಟ ಮತ್ತು ಅಲ್ಲಿನ ಪ್ರಮುಖ ವ್ಯಕ್ತಿಗಳ ಕುರಿತು ಹೊಸ ಪಠ್ಯದಲ್ಲಿ ಅಳವಡಿಸುತ್ತಿರುವುದು ತಿಳಿದು ಬಂದಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…