ಉತ್ತರಾಖಂಡ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಗುರುವಾರ(ಅ.05) ಮುಂಜಾನೆ 3:49 ರ ಸುಮಾರಿಗೆ ಉತ್ತರಕಾಶಿ ಜಿಲ್ಲೆಯಲ್ಲಿ ಭೂಮೇಲ್ಮೈಯಿಂದ 5 ಕಿಮೀ ಆಳದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.