ಉತ್ತರಖಂಡ: ಮೇಘಸ್ಫೋಟದ ಬಳಿಕ ಅಮರನಾಥ ಯಾತ್ರೆ ಪುನರಾರಂಭ!

ಅಮರನಾಥ: ಮೇಘಸ್ಫೋಟದಿಂದಾಗಿ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು (ಸೋಮವಾರ) ಪುನರಾರಂಭವಾಗಿದೆ. ಇಂದು ಶಿವಲಿಂಗದ ದರ್ಶನಕ್ಕೆ 4ಸಾವಿರ ಭಕ್ತರಿಗೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದು, ಯಾತ್ರಾರ್ಥಿಗಳು ಪಹಲ್ಗಾಮ್‌ನ ನುನ್ವಾನ್ ಬೇಸ್ ಕ್ಯಾಂಪ್‌ನಿಂದ ಹೊರಟಿದೆ.

ಸೋಮವಾರ ಬೆಳಗ್ಗೆ ನಾಲ್ಕೂವರೆ ಗಂಟೆಗೆ 3,010 ಭಕ್ತರು ಪಹಲ್ಗಾಮ್‌ನಿಂದ ಮತ್ತು 1,016 ಭಕ್ತರು ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಯಾವುದೇ ಕಾರಣಕ್ಕೂ ದರ್ಶನ ಪಡೆಯದೆ ಹಿಂತಿರುಗುವ ಮಾತೇ ಇಲ್ಲೆ ಎಂದು ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ.

ಕಳೆದ ಶುಕ್ರವಾರ ಉಂಟಾದ ಪ್ರವಾಹದಿಂದಾಗಿ ಅಮರನಾಥದಲ್ಲಿ 16 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಸುಮಾರು 36 ಮಂದಿ ನಾಪತ್ತೆಯಾಗಿದ್ದು, ಹತ್ತಾರು ಭಕ್ತರು ಗಾಯಗೊಂಡಿದ್ದಾರೆ. ಇಂದೂ ಕೂಡ ನಾಪತ್ತೆಯಾದವರಿಗಾಗು ಹುಡುಕಾಟ ಮುಂದುವರೆದಿದ್ದು, ಭಾರತೀಯ ಸೇನೆ ಮತ್ತು ಎನ್‌ಡಿಆರ್‌ಎಫ್ ಪಡೆ ಸಂತ್ರಸ್ತರನ್ನು ರಕ್ಷಿಸಲು ಪ್ರಯತ್ನಿಸುತ್ತಿವೆ.

ಇವೆಲ್ಲದರ ನಡುವೆ ಇಂದು ಪುನಃ ಯಾತ್ರಾರ್ಥಿಗಳಿಗೆ ಎಲ್ಲ ವ್ಯವಸ್ಥೆ ಮಾಡಲಾಗಿದ್ದು, ಯಾತ್ರೆ ಸುಗಮವಾಗಿ ಸಾಗುವ ನಿರೀಕ್ಷೆ ಇದೆ ಎಂದು ಅಮರನಾಥ ಯಾತ್ರೆ ಸಮಿತಿ ತಿಳಿಸಿದೆ.

ಅಮರನಾಥಕ್ಕೆ  ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಸಹಿತ ಎಲ್ಲಾ ಕನ್ನಡಿಗರೂ ಸುರಕ್ಷಿತರಾಗಿದ್ದಾರೆ ಎಂದೂ ಸರ್ಕಾರ ಸ್ಪಷ್ಟ ಪಡಿಸಿತ್ತು. ಅಮರನಾಥದವರೆಗೆ ತಲುಪಿದ್ದ ಬಂಟ್ವಾಳದ ತಂಡ‌ ಮಿಲಿಟ್ರಿ‌ ಬೇಸ್ ನಲ್ಲಿ ಇತರ ಸಹಸ್ರ ಸಹಸ್ರ ಯಾತ್ರಿಗಳ ಜೊತೆ ವಿಶ್ರಾಂತಿ ಪಡೆದಿದ್ದರು.

ಭಾನುವಾರ ಸ್ಥಳಕ್ಕೆ ಭೇಟಿ‌ನೀಡಿದ್ದ ಅಲ್ಲಿನ ರಾಜ್ಯಪಾಲರು ಸೋಮವಾರ ಬೆಳಿಗ್ಗೆ ದರ್ಶನಕ್ಕೆ ಅವಕಾಶ ಒದಗಿಸುವುದಾಗಿ ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆಯಿಂದ ಅಮರನಾಥ ದರ್ಶನಕ್ಕೆ ತೆರಳುತ್ತಿರುವುದಾಗಿ‌ ಯಾತ್ರಿ ಸುರೇಶ್ ಕೋಟ್ಯಾನ್ ಮಾಹಿತಿ‌ ನೀಡಿದ್ದಾರೆ.

Sneha Gowda

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

14 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago