News Karnataka Kannada
Monday, April 29 2024
ಉತ್ತರಖಂಡ

ಇನ್ಮುಂದೆ ಕೃಷಿ ಭೂಮಿ ಖರೀದಿಸಲು ಬೇರೆ ರಾಜ್ಯದವರಿಗೆ ನಿಷೇಧ: ಮಹತ್ವದ ನಿರ್ಧಾರ

Ban on people from other states from buying agricultural land: Big decision
Photo Credit : News Kannada

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕೃಷಿ ಮತ್ತು ತೋಟಗಾರಿಕೆಗಾಗಿ ಭೂಮಿ ಖರೀದಿಸಲು ಹೊರಗಿನವರಿಗೆ ಮಧ್ಯಂತರ ನಿಷೇಧ ವಿಧಿಸಲಾಗಿದೆ. ಹೀಗಾಗಿ ಇನ್ಮುಂದೆ ಬೇರೆ ರಾಜ್ಯದವರು ಉತ್ತರಾಖಂಡದಲ್ಲಿ ಕೃಷಿ ಭೂಮಿಯನ್ನು ಖರೀದಿಸುವುದಕ್ಕೆ ಅವಕಾಶವಿಲ್ಲ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಉತ್ತರಖಾಂಡ ಸರ್ಕಾರ ತೆಗೆದುಕೊಂಡ ಈ ತೀರ್ಮಾನ ಹೊಸ ಸಂಚಲನ ಸೃಷ್ಟಿಸಿದ್ದು, ಪ್ರತಿಪಕ್ಷ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಬಿಜೆಪಿ ಸರ್ಕಾರ ಕೃಷಿ ಭೂಮಿ ಮಾರಾಟಕ್ಕೆ ಸಂಬಂಧಿಸಿದಂತೆ ಐದು ಸದಸ್ಯರ ಭೂ ಕಾನೂನು ಹೆಸರಿನಲ್ಲಿ ಕರಡು ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಸದಸ್ಯರ ವರದಿಯ ಅನ್ವಯ ಉತ್ತರಖಂಡ ಜನರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮುಂದಿನ ಆದೇಶದವರೆಗೂ ಉತ್ತರಾಖಂಡದಲ್ಲಿ ಬೇರೆ ರಾಜ್ಯದ ಯಾರೂ ಕೂಡ ಕೃಷಿ ಮತ್ತು ತೋಟಗಾರಿಕೆ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಅನುಮತಿ ನೀಡುವುದಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು