ಉತ್ತರಾಖಂಡ: ಅಧಿಕಾರಿಗಳು ಅಕ್ರಮ ಮದರಸಾವನ್ನು ಧ್ವಂಸಗೊಳಿಸಿದ ಕೂಡಲೇ ನಗರ ಪ್ರದೇಶದಲ್ಲಿ ತೀವ್ರ ಹಿಂಸಾಚಾರ ಭುಗಿಲೆದ್ದಿದ್ದು, ಸ್ಥಳೀಯರ ಗುಂಪೊಂದು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದಲ್ಲದೆ, ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ವರದಿಯಾಗಿದೆ.
ಗಲಭೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಇದೀಗ ನಗರದ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕಾನೂನುಬಾಹಿರವಾಗಿ ನಿರ್ಮಿಸಿದ ಮದರಸಾವನ್ನು ಕೆಡವಿದ್ದಕ್ಕಾಗಿ ಸ್ಥಳೀಯ ನಿವಾಸಿಗಳು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲುಗಳನ್ನು ತೂರಿ ಆಕ್ರೋಶ ಹೊರಹಾಕಿದ್ದಾರೆ. ಸದ್ಯದ ವರದಿಯ ಪ್ರಕಾರ, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟುನಿಟ್ಟಿನ ಕರ್ಫ್ಯೂ ವಿಧಿಸಲಾಗಿದೆ.