ಶವಾಗಾರದಲ್ಲಿದ್ದ ವ್ಯಕ್ತಿಯ ದೇಹವನ್ನು ತಿಂದ ಇಲಿಗಳು

ಉತ್ತರಾಖಂಡ್‌: ಮರಣೋತ್ತರ ಪರೀಕ್ಷೆ ಬಳಿಕ ಶವಾಗಾರದಲ್ಲಿ ಇರಿಸಲಾಗಿದ್ದ ವ್ಯಕ್ತಿಯ ದೇಹವನ್ನು ಇಲಿಗಳು ತಿಂದಿರುವ ಘಟನೆ ಉತ್ತರಾಖಂಡ್‌ನ ಪೌರಿಯಲ್ಲಿ ಆಸ್ಪತ್ರೆಯಲ್ಲಿ ವರದಿಯಾಗಿದೆ.

ವ್ಯಕ್ತಿಯೊಬ್ಬರ ದೇಹವು ಇಲಿಗಳಿಂದ ಭಾಗಶಃ ವಿರೂಪಗೊಂಡ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿದೆ.

ಆಸ್ಪತ್ರೆ ಆಡಳಿತ ನಿರ್ಲಕ್ಷ್ಯ ವಹಿಸದೆ  ಈ ಘಟನೆ ನಡೆದಿದ್ದು, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಶವವನ್ನು ಇರಿಸಲಾಗಿದ್ದ ಫ್ರೀಜರ್‌ನ ಬೀಗ ಮುರಿದಿತ್ತು ಎಂದು ವ್ಯಕ್ತಿಯ ಸಹೋದರ ನಿತಿನ್ ಉಪ್ರೇತಿ ಹೇಳಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ದೇಹವು ಸುರಕ್ಷಿತವಾಗಿರುತ್ತದೆ ಎಂದು ಅವರು ಭರವಸೆ ನೀಡಿದ್ದರು.

ಗ್ರಾಮೀಣಾಭಿವೃದ್ಧಿ ಅಧಿಕಾರಿಯಾಗಿದ್ದ ವ್ಯಕ್ತಿ ಶುಕ್ರವಾರದಂದು ಅಸ್ವಸ್ಥತೆಯಿಂದ ಮೃತಪಟ್ಟಿದ್ದಾರೆ. ಅವರ ಕುಟುಂಬದವರು ಶವಪರೀಕ್ಷೆಗೆ ಮನವಿ ಮಾಡಿದ್ದರು.

ಇಂತಹ ಭೀಕರ ಘಟನೆ ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಗಿಲುಗಳನ್ನು ಸರಿಪಡಿಸಲು ಶ್ರೀನಗರದಿಂದ ಬಡಗಿಗಳನ್ನು ಕರೆಸಲಾಗಿದೆ ಎಂದು ತಿಳಿಸಿದ್ದಾರೆ.

Ashika S

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

5 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

24 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

54 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago