ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ, ಖಿನ್ನತೆ ನಿವಾರಕ ಮಾತ್ರೆ ಪೂರೈಕೆ

ಉತ್ತರಕಾಶಿ: ಯಮುನೋತ್ರಿ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದಲ್ಲಿ ಭಾನುವಾರ ಬೆಳಗ್ಗೆಯಿಂದ ಸಿಲುಕಿರುವ 40 ಕಟ್ಟಡ ಕಾರ್ಮಿಕರಿಗೆ ಖಿನ್ನತೆ ನಿವಾರಕ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದು ಉತ್ತರಾಖಂಡ ಸರ್ಕಾರ ಶನಿವಾರ ತಿಳಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ ಸರ್ಕಾರ, ”ಆರೋಗ್ಯ ಇಲಾಖೆಯು ಸುರಂಗದ ಹೊರಗೆ ಕಟ್ಟಡದಲ್ಲಿ ಶಿಬಿರವನ್ನು ಸ್ಥಾಪಿಸಿದ್ದು, ಅಲ್ಲಿ ಆರು ಹಾಸಿಗೆಗಳನ್ನು ಅಗತ್ಯ ಔಷಧಿಗಳೊಂದಿಗೆ ವ್ಯವಸ್ಥೆ ಮಾಡಲಾಗಿದೆ. ಸುರಂಗದ ಹೊರಗೆ ಒಟ್ಟು 10 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ವೈದ್ಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರು ಕೂಡ ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಸಿಕ್ಕಿಬಿದ್ದ ಕಾರ್ಮಿಕರಿಗೆ ವಿಟಮಿನ್ ಸಿ, ಮತ್ತು ಡಿ, ಬಿಕೋಸಿಲ್ ಝಡ್, ಖಿನ್ನತೆ-ನಿರೋಧಕ ಮಾತ್ರೆಗಳನ್ನು ನೀಡಲಾಯಿತು.
ಉತ್ತರಕಾಶಿಯ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ ಆರ್‌ಸಿಎಸ್ ಪನ್ವಾರ್, “ನಾವು ಸುರಂಗದೊಳಗೆ ಸಿಕ್ಕಿಬಿದ್ದ ಕಾರ್ಮಿಕರಿಗೆ ಸಮಾಲೋಚನೆಗಾಗಿ ಮನೋವೈದ್ಯರು ಮತ್ತು ಹಿರಿಯ ವೈದ್ಯರನ್ನು ಕಳುಹಿಸುತ್ತಿದ್ದೇವೆ. ಅವರಲ್ಲಿ ಕೆಲವರು ಕೆಲವು ದಿನಗಳ ಹಿಂದೆ ವಾಂತಿ ಮತ್ತು ಹೊಟ್ಟೆ ತೊಳೆಸುವಿಕೆ ಬಗ್ಗೆ ದೂರು ನೀಡಿದ್ದರು. ಪೈಪ್ ಮೂಲಕ ಔಷಧಗಳನ್ನು ಪೂರೈಸಿದ್ದೇವೆ. ನಾವು ಅವರಿಗೆ ವಿಟಮಿನ್ ಸಿ ಮತ್ತು ಡಿ ಯಂತಹ ಅಗತ್ಯ ಪೂರಕಗಳನ್ನು ನೀಡುತ್ತಿದ್ದೇವೆ.

Umesha HS

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

8 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

22 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

41 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

49 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

55 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago