ನೈನಿತಾಲ್: ವಾಹನವೊಂದು 150 ಅಡಿ ಆಳದ ಕಣಿವೆಗೆ ಬಿದ್ದು ಏಳು ನೇಪಾಳಿ ಪ್ರಜೆಗಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಇಂದು ನಡೆದಿದೆ.
ಬೆತಲ್ಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ರಾಜ್ಯ ವಿಪತ್ತು ನಿರ್ವಹಣ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದೆ. ಮೂವರು ಗಾಯಳುಗಳನ್ನು ರಕ್ಷಣೆ ಮಾಡಿ, ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.