ಉತ್ತರಕಾಶಿ: ಕಳೆದ 17 ದಿನಗಳಿಂದ ಉತ್ತರಕಾಶಿಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇದೀಗ 41 ಕಟ್ಟಡ ಕಾರ್ಮಿಕರನ್ನು ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಫ್ಟರ್ ನಲ್ಲಿ ಋಷಿಕೇಶದ ಏಮ್ಸ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಯಾವುದೇ ಕಾರ್ಮಿಕರಿಗೆ ಬಾಹ್ಯ ಗಾಯಗಳಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಪ್ರಧಾನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಅಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು. ಒಂದೇ ಕಡೆಯಿದ್ದ ಎಲ್ಲಾ ಕಾರ್ಮಿಕರ ಬಳಿ ಮಾತನಾಡಿ, ಆರೋಗ್ಯ ವಿಚಾರಿಸಿದರು.