News Karnataka Kannada
Monday, May 06 2024
ಪಶ್ಚಿಮ ಬಂಗಾಳ

ಕೋವಿಡ್ ಲಸಿಕಾ ಕೇಂದ್ರದಲ್ಲಿ ನೂಕುನುಗ್ಗಲು: ಹಲವರಿಗೆ ಗಾಯ, ಐವರ ಸ್ಥಿತಿ ಗಂಭೀರ

Covid Vaccine
Photo Credit :

ಪಶ್ಚಿಮ ಬಂಗಾಳ : ಕೋವಿಡ್ ಲಸಿಕಾ ಕೇಂದ್ರದ ಬಳಿ ಜನಜಂಗುಳಿಯಿಂದ ಕಾಲ್ತುಳಿತ ಉಂಟಾಗಿದ್ದು, ಹಲವರು ಗಾಯಗೊಂಡಿದ್ದಾರೆ, ಐವರ ಸ್ಥಿತಿ ಗಂಭೀರವಾಗಿದೆ.

ಈ ದುರ್ಘಟನೆ ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರದಲ್ಲಿ ನಡೆದಿದೆ.

ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನ ಶಾಲೆಯೊಂದರಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿತ್ತು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್ ಜನರಿಂದ ಒಮ್ಮೆಲ್ಲೆ ನೂಕುನುಗ್ಗಲು ಉಂಟಾದ್ದರಿಂದ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸ್ಥಳೀಯರು ಕೂಡ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

ಘಟನೆಯಲ್ಲಿ ಸುಮಾರು 25ಕ್ಕೂ ಜನರು ಗಾಯಗೊಂಡಿದ್ದಾರೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು