ಜಲ್ಪೈಗುರಿಯಲ್ಲಿ ತೀವ್ರ ಜ್ವರ, 130 ಮಕ್ಕಳು ಅಸ್ವಸ್ತ

ಪಶ್ಚಿಮ ಬಂಗಾಳ :  ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ತೀವ್ರ ಜ್ವರ ಮತ್ತು ಭೇದಿಯಿಂದ 130 ಮಕ್ಕಳು ಅಸ್ವಸ್ತಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜಲ್ಪೈಗುರಿ ಸದರ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು. ನಾವು ಈ ಪರಿಸ್ಥಿತಿಯ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ ಮತ್ತು ಯಾರಿಗೂ ಪ್ರವೇಶ ನಿರಾಕರಿಸದಂತೆ ಆಸ್ಪತ್ರೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಕೋವಿಡ್ 19 ಮೂರನೇ ಅಲೆ ಮಕ್ಕಳ ಮೇಲೆಯೇ ಹೆಚ್ಚಿನ ಪರಿಣಾಮ ಬೀರಲಿದೆ ಎಂಬ ತಜ್ಞರು ಎಚ್ಚರಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಗತ್ಯವಿದ್ದರೆ ಮಕ್ಕಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುವುದು ಎಂದು ಅಧಿಕಾರಿ ಹೇಳಿದರು.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

19 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

32 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

56 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago