News Karnataka Kannada
Tuesday, April 30 2024
ಪಶ್ಚಿಮ ಬಂಗಾಳ

ಟ್ರಕ್‌-ಕಾರಿನ ನಡುವೆ ಭೀಕರ ಅಪಘಾತ: 18 ಮಂದಿ ಸ್ಥಳದಲ್ಲಿಯೇ ಸಾವು, ಐವರಿಗೆ ಗಾಯ

Accident Ckm Car Main 08072021
Photo Credit :

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಟ್ರಕ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. 18 ಜನರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರಿ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ನಾಡಿಯಾದ ಫುಲ್ಭರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮ್ಯಾಟಡೋರ್ ಕಾರು ಉತ್ತರ 24 ಪರಗಣಗಳ ಬಾಗ್ಡಾದಿಂದ ಅಂತ್ಯಸಂಸ್ಕಾರಕ್ಕಾಗಿ ನಬದೀಪ್‌ ಸ್ಮಶಾನಕ್ಕೆ ಹೋಗಿತ್ತು.

ಈ ವೇಳೆ ಕಾರು ನಾಡಿಯಾದ ಹಂಸಖಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ಬರಿ ಪ್ರದೇಶದ ರಸ್ತೆ ಬದಿಯಲ್ಲಿ ಕಲ್ಲುಗಳನ್ನು ತುಂಬಿಕೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಶಕ್ತಿನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರು ವೇಗವಾಗಿ ಬರುತ್ತಿದ್ದು, ದಟ್ಟವಾದ ಮಂಜು ಕವಿದಿದ್ದರಿಂದ ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೇ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ತನಿಖೆ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು