News Karnataka Kannada
Saturday, April 27 2024
ಪಶ್ಚಿಮ ಬಂಗಾಳ

ನೇಣು ಬಿಗಿದ ಸ್ಥಿತಿಯಲ್ಲಿ ಕಿರುತೆರೆಯ ನಟಿಯ ಮೃತದೇಹ ಪತ್ತೆ

Untitled 1
Photo Credit :

ಪಶ್ಚಿಮ ಬಂಗಾಳ : ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರ ಮೃತದೇಹ ದಕ್ಷಿಣ ಕೋಲ್ಕತ್ತಾದ ಅಪಾರ್ಟ್​​ಮೆಂಟ್‌ನಲ್ಲಿಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಲ್ಲವಿ ಅವರು ಏಪ್ರಿಲ್‌ನಲ್ಲಿ ದಕ್ಷಿಣ ಕೋಲ್ಕತ್ತಾದ ಗಾರ್ಫಾ ಪ್ರದೇಶದಲ್ಲಿ ಅಪಾರ್ಟ್​​ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದರು ಎನ್ನಲಾಗ್ತಿದೆ.

ತಮ್ಮ ಗೆಳೆಯನ ಜೊತೆ ವಾಸವಿದ್ದರು. ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅಪಾರ್ಟ್‌ಮೆಂಟ್‌ನ ಕೇರ್‌ಟೇಕರ್, ಮಲಗುವ ಕೋಣೆಯಲ್ಲಿ ಅವರು ನೇಣು ಬಿಗಿದುಕೊಂಡಿದ್ದಾಳೆ ಎಂದು ತಿಳಿದ ತಕ್ಷಣ ಅವರ ಗೆಳೆಯ ನನ್ನನ್ನು ಜೋರಾಗಿ ಕೂಗಿ ಕರೆದರು. ನಂತರ ಇತರೆ ಮನೆಗೆಲಸದ ಸಿಬ್ಬಂದಿಯೊಂದಿಗೆ ಪಲ್ಲಬಿ ಅವರ ಶವವನ್ನು ಕೆಳಗೆ ಇಳಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತಿಳಿಸಿದರು.

21 ವರ್ಷದ ನಟಿ ಕುಂಜಚ್ಚಯ, ರೇಷಮ್ ಜಾಪಿ, ಮೊನ್ ಮಾನೆ ನ ದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇನ್ನೂ, ನಾವು ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಸದ್ಯ ನಾವು ಆಕೆಯ ಸಂಗಾತಿಯೊಂದಿಗೆ ಮಾತನಾಡುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಹೆಚ್ಚಿನ ವಿವರಗಳು ಲಭ್ಯವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು