News Karnataka Kannada
Monday, April 29 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಲದ ಹಿಂಸಾಚಾರ ಪ್ರಕರಣ; ಸಿಬಿಐ ತನಿಖೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್‌

Calcutta
Photo Credit :

ಪಶ್ಚಿಮ ಬಂಗಾಲದ ಬೀರ್ಭೂಮ್‌ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವವಾಗಿ ದಹಿಸಿದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

ಪ್ರಸ್ತುತ ತನಿಖೆ ನಡೆಸುತ್ತಿರುವ ಎಸ್‌ ಐಟಿಯು ಪ್ರಕರಣ ಕುರಿತು ಕಲೆಹಾಕಿರುವ ದಾಖಲೆಗಳು ಹಾಗೂ ವಶಕ್ಕೆ ಪಡೆದಿರುವ ಆರೋಪಿಗಳನ್ನು ಸಿಬಿಐ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಜೊತೆಗೆ ಮುಂದಿನ ವಿಚಾರಣೆಯ ದಿನಾಂಕವಾದ ಏ.7 ರೊಳಗೆ ಪ್ರಕರಣದ ಕುರಿತಾದ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್‌ ಆದೇಶಿಸಿದೆ.

ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ಅರ್ಜಿಗಳನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಎತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಆರ್ ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು