ಪಶ್ಚಿಮ ಬಂಗಾಳ ಐಒಸಿಎಲ್ ಘಟಕದಲ್ಲಿ ಅಗ್ನಿ ಅವಘಡ:3 ಸಾವು, 30 ಮಂದಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಇರುವ ಐಒಸಿಎಲ್ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಪ್ರಾಣ ಬಿಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಹಲ್ದಿಯಾ ಸಂಸ್ಕರಣಾಗಾರದ ವಿವಿಧ ಪ್ರಮುಖ ಘಟಕಗಳ ಸ್ಥಗಿತಗೊಳಿಸುವುದು ಮತ್ತು ನಿರ್ವಹಣೆಯನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ. ಮೋಟಾರ್ ಸ್ಪಿರಿಟ್ ಕ್ವಾಲಿಟಿ (MSQ) ಘಟಕದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಈ ಘಟನೆಯಲ್ಲಿ ಗಾಯಗೊಂಡವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಲ್ದಿಯಾ ಪುರಸಭೆಯ ಅಧ್ಯಕ್ಷ ಎಸ್‌ಕೆ ಅಜ್ಗರ್ ಅಲಿ ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಥಮ ಚಿಕಿತ್ಸಾ ಕೇಂದ್ರದಲ್ಲಿ ಗಾಯಗೊಂಡ 47 ಜನರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಅವರನ್ನು ಹಲ್ದಿಯಾ ರಿಫೈನರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೂ ಏಳು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

 

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago