ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ 34,000 ಮತಗಳ ಮುನ್ನಡೆ ಸಾಧಿಸಿದ್ದಾರೆ.
11ನೇ ಸುತ್ತಿನ ಮತ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 34 ಸಾವಿರ ಮತಗಳ ಮುನ್ನಡೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಒಟ್ಟು 21 ಸುತ್ತಿನ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ.
ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಉಪಚುನಾವಣಾ ಅಭ್ಯರ್ಥಿಗಳು. ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.