ಬಂಗಾಳದಲ್ಲಿ ಪಟಾಕಿ ನಿಷೇಧಿಸಿ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್‌

ಕಾಳಿ ಪೂಜೆ, ದೀಪಾವಳಿ ಮತ್ತು ಇತರ ಹಬ್ಬಗಳ ಸಮಯದಲ್ಲಿ ಪಟಾಕಿಗಳನ್ನು ನಿಷೇಧಿಸುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಅಜಯ್ ರಸ್ತೋಗಿ ಅವರ ವಿಶೇಷ ಪೀಠವು, ನಿಷೇಧಿತ ಪಟಾಕಿಗಳು ಮತ್ತು ಸಂಬಂಧಿತ ವಸ್ತುಗಳನ್ನು ರಾಜ್ಯಕ್ಕೆ ಆಮದು ಮಾಡಿಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವ ಸಾಧ್ಯತೆಯನ್ನು ತಿಳಿಸುವಂತೆ ಬಂಗಾಳ ಸರ್ಕಾರಕ್ಕೆ ಕೇಳಿದೆ.

ದೀಪಾವಳಿ ರಜೆಗೂ ಮುನ್ನ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠವು, ರಾಜ್ಯದಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟ, ಬಳಕೆ ಮತ್ತು ಖರೀದಿಯನ್ನು ನಿಷೇಧಿಸಿ ಅಕ್ಟೋಬರ್ 29ರಂದು ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿತು.

ಈ ವರ್ಷ ಹಬ್ಬಗಳ ಆಚರಣೆಗಳಲ್ಲಿ ಯಾವುದೇ ರೀತಿಯ ಪಟಾಕಿಗಳ ಬಳಕೆ, ಪ್ರದರ್ಶನ ಅಥವಾ ಪಟಾಕಿಗಳನ್ನು ಸಿಡಿಸದಂತೆ ರಾಜ್ಯವು ಖಚಿತಪಡಿಸಿಕೊಳ್ಳಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿತ್ತು.

Sneha Gowda

Recent Posts

ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು

ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ  ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…

14 mins ago

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಕೆ : ಮೂವರ ಬಂಧನ, 15 ಟನ್‌ ವಶ

ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್​ ನಕಲಿ ಮಸಾಲೆ…

16 mins ago

ಮುಂಬೈ ವಿಮಾನ ನಿಲ್ದಾಣದಲ್ಲಿ 12.47 ಕೆ.ಜಿ ಚಿನ್ನ, 10 ಮಂದಿ ಆರೋಪಿಗಳು ವಶಕ್ಕೆ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಸ್ಟಮ್ಸ್‌ ಇಲಾಖೆ ಸಿಬ್ಬಂದಿ…

18 mins ago

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

44 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

45 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

1 hour ago