ಇಡೀ ದೇಶದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ದೀದಿ ಪ್ರತಿ ಹಂತದಲ್ಲಿಯೂ ಮುನ್ನಡೆ ಕಾಯ್ದುಕೊಂಡು ಬಂದಿದ್ದರು. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತ್ರಿಬೇವಾಲ ದೀದಿ ಪಡೆದ ಮತದ ಸಮೀಪಕ್ಕೂ ಬರಲಾಗಲಿಲ್ಲ.
ಇದೀಗ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ವಿರುದ್ಧ 58 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.