ಭವಾನಿಪುರ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವರು ಭವಾನಿಪುರ ವಿಧಾನಸಭಾ ಸ್ಥಾನಕ್ಕೆ ಉಪಚುನಾವಣೆಗೆ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ. ಇಂದು ಸರ್ವೇ ಭವನಕ್ಕೆ ಆಗಮಿಸಿದ ಮಮತಾ, ಭವಾನಿಪುರ ವಿಧಾನ ಸಭಾ ಮತಕ್ಷೇತ್ರಕ್ಕೆ ಟಿಎಂಸಿ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ದೀದಿ ವಿರುದ್ಧ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್, ಸಿಪಿಐ-ಎಂ ಪಕ್ಷದಿಂದ ಶ್ರೀಜಿಬ್ ಬಿಸ್ವಾಸ್ ಅವರು ಕಣಕ್ಕಿಳಿದಿದ್ದಾರೆ.
ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದ ವೇಳಾಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸೆಪ್ಟೆಂಬರ್ 30ರಂದು ನಡೆಯಲಿದೆ.