ಕೋಲ್ಕತ್ತ: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಟಿಬ್ರೆವಾಲ್, ‘ಇದು ಅನ್ಯಾಯದ ವಿರುದ್ಧದ ಹೋರಾಟ. ಪಶ್ಚಿಮ ಬಂಗಾಳದ ಜನರ ನ್ಯಾಯಕ್ಕಾಗಿ ಹೋರಾಟ’ ಎಂದು ಹೇಳಿದ್ದಾರೆ.
ಭವಾನಿಪುರ ಉಪಚುನಾವಣೆಯು ಸೆಪ್ಟೆಂಬರ್ 30ರಂದು ನಡೆಯಲಿದ್ದು, ಅಕ್ಟೋಬರ್ 3ರಂದು ಫಲಿತಾಂಶ ಹೊರಬೀಳಲಿದೆ.