ಕೋಲ್ಕತ್ತಾ: ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ.
ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಎಡರಂಗದ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ನಂದಿಗ್ರಾಮ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ