ಮಾಲ್ಡಾ(ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲಿಯಾಚಕ್ ಪೊಲೀಸ್ ಠಾಣಾ ವ್ಯಾಪ್ತಿಯ ಜಾದುಪುರ್ ನಯಾಗ್ರಾಮ್ ಗ್ರಾಮದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ. ಬಾಲಕ ತಬ್ರೇಜ್ ಶೇಖ್ ಮಗು ಅಡುಗೆಮನೆಯ ಬಳಿ ಆಟವಾಡುತ್ತಿದ್ದಾಗ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡ ಬಾಲಕನನ್ನು ಕಾಲಿಯಾಚಕ್ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಅವರು ಹೇಳಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.