ಕೊಲ್ಕತ್ತಾ: ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಸಚಿವರ ಮನೆ ಸೇರಿದಂತೆ ಕೋಲ್ಕತ್ತಾದ 13 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಶೋಧ ನಡೆಸುತ್ತಿದೆ.
ಘೋಷ್ ಅವರು ಮಧ್ಯಮಗ್ರಾಮ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದು, ಸರ್ಕಾರಿ ಉದ್ಯೋಗಗಳಿಗೆ ಅನರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಘೋಷ್ ಮತ್ತು ಅವರ ಸಹಚರರು ಉದ್ಯೋಗಕ್ಕಾಗಿ ಅಭ್ಯರ್ಥಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಮೇಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.