ನಾಲ್ಕು ವಿಮಾನ ನಿಲ್ದಾಣದಲ್ಲಿ ಬಾಂಬ್; ಕೆಫೆಯಲ್ಲಿಟ್ಟಿದ್ದಕ್ಕಿಂತ ದೊಡ್ಡದೆಂದು ಬೆದರಿಕೆ

ಪಶ್ಚಿಮ ಬಂಗಾಳ: ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶೋಧ ಕಾರ್ಯ ಬಳಿಕ ಇದೊಂದು ಫೇಕ್ ಬೆದರಿಕೆ ಎಂದು ಸಮಾಧಾನಗೊಂಡಿದ್ದಾರೆ.

ಕಳೆದ ದಿನ ಮಧ್ಯಾಹ್ನ 12.55ಕ್ಕೆ ಬಾಂಬ್ ಸ್ಫೋಟ ಆಗುವ ಬಗ್ಗೆ ಇ-ಮೇಲ್​ನಲ್ಲಿ ತಿಳಿಸಿದ್ದರು. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟ ತಂಡವೇ ಬಾಂಬ್ ಇಟ್ಟಿದೆ. ಇದೀಗ ಅದಕ್ಕಿಂತ ದೊಡ್ಡ ಬಾಂಬ್​​ಗಳನ್ನು ಇಡಲಾಗಿದೆ. ಒಂದೆಲ್ಲ, ಎರಡಲ್ಲ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇಡಲಾಗಿದೆ. ಎಲ್ಲಾ ಬಾಂಬ್‌ಗಳು ಮಧ್ಯಾಹ್ನ 12.55 ಕ್ಕೆ ಸ್ಫೋಟಗೊಳ್ಳುತ್ತವೆ ಎಂದು ಮೇಲ್‌ನಲ್ಲಿ ತಿಳಿಸಲಾಗಿತ್ತು ಎಂದು ಹೇಳಿದೆ.

ಇನ್ನು ವಿಮಾನ ನಿಲ್ದಾಣದ ಅಧಿಕಾರಿಗಳು, ಸಿಐಎಸ್‌ಎಫ್ ಮತ್ತು ಪಶ್ಚಿಮ ಬಂಗಾಳದ ಪೊಲೀಸರು ಇ-ಮೇಲ್‌ ಕಳುಹಿಸಿದವರ ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದಾರೆ.

 

Ashitha S

Recent Posts

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

2 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

4 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

26 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

39 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

1 hour ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago