ಅಗ್ನಿಪಥ ಯೋಜನೆಯ ಕುರಿತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಪಶ್ಚಿಮ ಬಂಗಾಳ : ಅಗ್ನಿಪಥ ಯೋಜನೆಯ ಮೂಲಕ ಬಿಜೆಪಿ ತನ್ನದೇ ಆದ ಸಶಸ್ತ್ರ ಕಾರ್ಯಕರ್ತರನ್ನು ರಚಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಅಗ್ನಿಪಥ್ ಯೋಜನೆ ಮೂಲಕ ಸಶಸ್ತ್ರ ಪಡೆಗಳಲ್ಲಿ ನೇಮಕಾತಿ ಕುರಿತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು “ಬಿಜೆಪಿಯು ಈ ಯೋಜನೆಯ ಮೂಲಕ ತನ್ನದೇ ಆದ ಶಸ್ತ್ರಸಜ್ಜಿತ ಕೇಡರ್ ಬೇಸ್ ಅನ್ನು ರಚಿಸಲು ಪ್ರಯತ್ನಿಸುತ್ತಿದೆ.

ನಾಲ್ಕು ವರ್ಷಗಳ ನಂತರ ಅವರು ಏನು ಮಾಡುತ್ತಾರೆ? ಪಕ್ಷವು ಯುವಕರ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಲು ಬಯಸುತ್ತದೆ” ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಹರಿಹಾಯ್ದರು.

ನಾಲ್ಕು ವರ್ಷಗಳ ಸೇವಾ ಅವಧಿಯ ನಂತರ ಬಿಜೆಪಿ ತನ್ನ ಪಕ್ಷದ ಕಚೇರಿಗಳಲ್ಲಿ ‘ಅಗ್ನಿವೀರ್’ ಸೈನಿಕರನ್ನು “ಕಾವಲುಗಾರ” ರನ್ನಾಗಿ ನೇಮಿಸಿಕೊಳ್ಳಲು ಯೋಜಿಸುತ್ತಿದೆಯೇ ಎಂದು ಅವರು ಪ್ರಶ್ನಿಸಿದರು.

Sneha Gowda

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

6 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

20 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

36 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago