News Karnataka Kannada
Sunday, May 05 2024
ಪಶ್ಚಿಮ ಬಂಗಾಳ

ಕೋಲ್ಕತ್ತ: ಸಚಿವ ಪಾರ್ಥ ಚಟರ್ಜಿ 10 ದಿನ ಇ.ಡಿ ಕಸ್ಟಡಿಗೆ

Minister Partha Chatterjee sent to 10-day ED custody
Photo Credit : Twitter

ಕೋಲ್ಕತ್ತ: ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನೂ ಕೋಲ್ಕತ್ತ ನ್ಯಾಯಾಲಯವು 10 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಚಟರ್ಜಿ ಮತ್ತು ಅರ್ಪಿತಾ ಅವರನ್ನು  ಬಂಧಿಸಿದ್ದು, ಭುವನೇಶ್ವರದ ಏಮ್ಸ್‌ನಲ್ಲಿ ಚಟರ್ಜಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಅವರ ಆರೋಗ್ಯದ ಮೇಲೆ ಯಾವುದೇ ಸಕ್ರಿಯ ನಿಗಾದ ಅಗತ್ಯವಿಲ್ಲ ಎಂದು ವರದಿ ಬಂದಿತ್ತು. ಆ ಬಳಿಕ ಚಟರ್ಜಿಯವರನ್ನು 14 ದಿನಗಳ ಕಸ್ಟಡಿಗೆ ಇಡಿ ಕೋರಿತ್ತು,

ಈ ಸಂದರ್ಭ ಸಚಿವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಂಕಶಾಲಾದ ಇ.ಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿಬೊನ್ ಕುಮಾರ್ ಸಾಧು ಅವರು, 10 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿದರು. ಅರ್ಪಿತಾ ಮುಖರ್ಜಿ ಅವರನ್ನೂ ಆಗಸ್ಟ್ 3ರವರೆಗೆ ಕಸ್ಟಡಿಗೆ ನೀಡಲಾಗಿದೆ.

ಚಟರ್ಜಿ ಅವರನ್ನು ಭುವನೇಶ್ವರದ ಏಮ್ಸ್‌ಗೆ ಕರೆದೊಯ್ದು ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ನುರಿತ ವೈದ್ಯರಿಂದ ತಪಾಸಣೆ ಮಾಡಿಸುವಂತೆ ಭಾನುವಾರ ಕಲ್ಕತ್ತ ಹೈಕೋರ್ಟ್, ಇ.ಡಿ ಅಧಿಕಾರಿಗಳಿಗೆ ಸೂಚಿಸಿತ್ತು. ಅಲ್ಲದೆ, ಇಬ್ಬರೂ ಆರೋಪಿಗಳನ್ನು ಪ್ರತೀ 48 ಗಂಟೆಗೊಮ್ಮೆ ತಪಾಸಣೆ ನಡೆಸಬೇಕು ಮತ್ತು ತನಿಖಾಧಿಕಾರಿಗಳು ಅವರಿಗೆ ಕಿರುಕುಳ ನೀಡಬಾರದು ಎಂದೂ ಸೂಚಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು