ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ: ಓರ್ವ ಅಪ್ರಾಪ್ತ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ಅಪ್ರಾಪ್ತ ಮೃತಪಟ್ಟಿದ್ದು, ಇಬ್ಬರು ಅಪ್ರಾಪ್ತರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಪಾಂಡುವಾ ನೇತಾಜಿಪಲ್ಲಿ ಕಾಲೋನಿಯ ಕೊಳದ ಪಕ್ಕದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿದೆ.

ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ರೂಪಮ್ ಬಲ್ಲವ್ (13) ಮತ್ತು ಸೌರವ್ ಚೌಧರಿ (8) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ.

ಸ್ಫೋಟ ಸಂಭವಿಸಿದ ವೇಳೆ ಮೂವರು ಬಾಲಕರನ್ನು ಪಾಂಡುವಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ರಾಜ್ ಬಿಸ್ವಾಸ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಏಕಾಏಕಿ ಆ ಪ್ರದೇಶದಲ್ಲಿ ಭಾರೀ ಶಬ್ದ ಕೇಳಿಬಂದಿದೆ. ತಕ್ಷಣವೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ನೋಡಿದಾಗ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಗಮನಿಸಿದ್ದಾರೆ.

ಈ ಕುರಿತು ಹೂಗ್ಲಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ashika S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

3 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

9 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

21 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

32 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

52 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago