ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.
ಡಿಜಿಪಿ ಹುದ್ದೆಯಿಂದ IPS ರಾಜೀವ್ ಕುಮಾರ್ ಅವರನ್ನು ವಜಾಗೊಳಿಸಿದ ನಂತರ ವಿವೇಕ್ ಸಹಾಯ್ ಅವರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಲಾಗಿದೆ. ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.
ಸಾರ್ವಜನಿಕ ಸೇವೆಯ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನೋಟಿಸ್ನಲ್ಲಿ ಬರೆದಿದ್ದಾರೆ.
ವಿವೇಕ್ ಸಹಾಯ್ ಅವರು ಪಶ್ಚಿಮ ಬಂಗಾಳ ಕೇಡರ್ನ 1988 ಬ್ಯಾಚ್ನ ಐಪಿಎಸ್ ಅಧಿಕಾರಿ. ಅವರು ಈ ಹಿಂದೆ ಡೈರೆಕ್ಟರ್ ಜನರಲ್ (ಡಿಜಿ), ಪ್ರಾವಿಶನಿಂಗ್ ಮತ್ತು ಗೃಹರಕ್ಷಕರ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.