News Karnataka Kannada
Wednesday, May 08 2024
ಪಶ್ಚಿಮ ಬಂಗಾಳ

ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಹಳಿ ತಪ್ಪಿದ 12 ಬೋಗಿಗಳು

goods train collide
Photo Credit : IANS

ಪಶ್ಚಿಮ ಬಂಗಾಳ: ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 12 ಬೋಗಿಗಳು ಹಳಿ ತಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಾಕುರದಲ್ಲಿ ಇಂದು ಮುಂಜಾನೆ (ಜೂ.25) ನಡೆದಿದೆ.

ಓಂಡಾ ರೈಲು‌ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಒಂದು ಗೂಡ್ಸ್ ರೈಲು ಮತ್ತೊಂದು ಗೂಡ್ಸ್ ರೈಲಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಗೂಡ್ಸ್ ರೈಲಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ ನಾಲ್ಕು ಜಿಲ್ಲೆಗಳಿಗೆ ಸೇವೆ ಸಲ್ಲಿಸುತ್ತದೆ. ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್‌ನ ಮೂರು ಜಿಲ್ಲೆಗಳಾದ ಧನ್‌ಬಾದ್, ಬೊಕಾರೊ ಮತ್ತು ಸಿಂಗ್‌ಭೂಮ್. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು