News Karnataka Kannada
Wednesday, May 01 2024
ಪಶ್ಚಿಮ ಬಂಗಾಳ

ರಾಮ ನವಮಿ ಮೆರವಣಿಗೆ ವೇಳೆ ಸ್ಫೋಟ: ಮಹಿಳೆಗೆ ಗಂಭೀರ ಗಾಯ

ರಾಮ ನವಮಿ ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್​ನಲ್ಲಿ ನಡೆದಿದೆ. 
Photo Credit : NewsKarnataka

ಪಶ್ಚಿಮ ಬಂಗಾಳ:  ರಾಮ ನವಮಿ ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್​ನಲ್ಲಿ ನಡೆದಿದೆ.

ಈ ಘಟನೆಯಲ್ಲಿ  ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಕ್ತಿಪುರ ಪ್ರದೇಶದಲ್ಲಿ ರಾಮನವಮಿ ಹಬ್ಬದಂದು ಕೆಲವು ಕಿಡಿಗೇಡಿಗಳು ಕಟ್ಟಡದ ಮೇಲಿಂದ ಕಲ್ಲು ತೂರಾಟ ನಡೆಸಿದ್ದು, ಘಟನೆ ಬಗ್ಗೆ ತೀವ್ರ ತನಿಖೆ ನಡೆಸುತ್ತಿರುವ ಪೊಲೀಸರು, ಕಲ್ಲು ತೂರಾಟ ಮಾಡಿರುವ ಕಿಡಿಗೇಡಿಗಳಿಗೂ ಸ್ಫೋಟಕ್ಕೂ ಸಂಬಂಧವಿದೆಯಾ ಎಂಬ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಇನ್ನು ರಾಮ ನವಮಿ ರ‍್ಯಾಲಿ ವೇಳೆ ಕಲ್ಲೂ ತೂರಾಟ ನಡೆದಿದೆ ಎಂದು ಬಂಗಾಳ ಬಿಜೆಪಿ ಘಟಕ ಆರೋಪಿಸಿದೆ. ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಹೇಳಿದೆ. ಪೊಲೀಸರು ಗಲಾಟೆಯನ್ನು ಚದುರಿಸಲು ಲಾಠಿ ಚಾರ್ಜ್​ ಕೂಡ ಮಾಡಿದ್ದಾರೆ. ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಈ ಘಟನೆ ಎರಡು ಸಮುದಾಯದ ನಡುವಿನ ಸಂಘರ್ಷಕ್ಕೂ ದಾರಿ ಮಾಡಿಕೊಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು