News Karnataka Kannada
Saturday, May 11 2024
ದೇಶ

ಪ್ರಧಾನಿ ಮೋದಿ ಸರ್ಕಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇಲ್ಲಿ ತಿಳಿಸಿ

Jan Mn
Photo Credit : News Kannada

ದೆಹಲಿ: ಪ್ರಧಾನಿ ಮೋದಿ ಅವರು ತಮ್ಮ 10 ವರ್ಷದ ಆಡಳಿತ ಬಗ್ಗೆ ಹಾಗೂ ಭಾರತದ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸದ ಬಗ್ಗೆ ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ‘ನಮೋ’ ಅಪ್ಲಿಕೇಶನ್ ಮೂಲಕ ಜನ್​​ ಮ್ಯಾನ್​​​​​​ ಸಮೀಕ್ಷೆ ಅಭಿಮಾನದ ಮೂಲಕ ತಿಳಿಸಬಹುದು.

ಪ್ರಧಾನಿ ಮೋದಿ ಅವರು 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಹಾಗೂ ಸಂಸದರು ತಮ್ಮ ಕ್ಷೇತ್ರದಲ್ಲಿ ಮಾಡಿದ ಕೆಲಸದ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ಈ ಅಭಿಯಾನದ ಮೂಲಕ ತಿಳಿಸಬಹುದು.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ, ಬಿಜೆಪಿ ಸರ್ಕಾರ ಈ ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ತಮ್ಮ ಸರ್ಕಾರದ ಮತ್ತು ಸಂಸದರು, ಸಚಿವರ ಕಾರ್ಯಕ್ಷಮತೆಯ ಬಗ್ಗೆ ಜನರಲ್ಲಿರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿಯುತ್ತಿದ್ದಾರೆ.

ಇನ್ನು ಈ ಅಭಿಮಾನದ ಬಗ್ಗೆ ಪ್ರಧಾನಿ ಮೋದಿ ಅವರೇ ತಮ್ಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು? NaMo ಅಪ್ಲಿಕೇಶನ್‌ನಲ್ಲಿ ಜನ್ ಮ್ಯಾನ್ ಸಮೀಕ್ಷೆಯ ಮೂಲಕ ನಿಮ್ಮ ಪ್ರತಿಕ್ರಿಯೆಯನ್ನು ನೇರವಾಗಿ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಮೋದಿ ಅವರು ಲಿಂಕ್​​ನ್ನು ಹಂಚಿಕೊಂಡಿದ್ದಾರೆ. ಜನರ ಅಭಿಪ್ರಾಯವನ್ನು ಸಂಗ್ರಹ ಮಾಡಿ ಮುಂದಿನ ದಿನಗಳಲ್ಲಿ ಜನರಿಗೆ ಬೇಕಾದ ಅಭಿವೃದ್ಧಿ ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು