News Karnataka Kannada
Monday, April 22 2024
Cricket
ದೇಶ

ಭಾರತದ 65 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ

WhatsApp Account banned
Photo Credit : IANS

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಮೇ ತಿಂಗಳಲ್ಲಿ ಬರೋಬ್ಬರಿ 65 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮೇ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 6,508,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ಭಾನುವಾರ ತಿಳಿಸಿದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ಕೂಡ ಭಾರತದಲ್ಲಿ 74 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮೇ 1 ಮತ್ತು ಮೇ 31 ರ ನಡುವೆ, 6,508,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ ಮತ್ತು ಈ ಖಾತೆಗಳಲ್ಲಿ 2,420,700 ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ.

ಲಕ್ಷಾಂತರ ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಸಬಲೀಕರಣಗೊಳಿಸುವ ಪ್ರಯತ್ನದಲ್ಲಿ, ಕೇಂದ್ರವು ಇತ್ತೀಚೆಗೆ ಕುಂದುಕೊರತೆ ಮೇಲ್ಮನವಿ ಸಮಿತಿಯನ್ನು (ಜಿಎಸಿ) ಪ್ರಾರಂಭಿಸಿತು. ಇದು ವಿಷಯ ಮತ್ತು ಇತರ ಕಳವಳಗಳನ್ನು ಪರಿಶೀಲಿಸುತ್ತದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು