News Karnataka Kannada
Tuesday, April 16 2024
Cricket
ದೇಶ

ಮಹಿಳೆಯರ ಬೆತ್ತಲೆ ಮೆರವಣಿಗೆ, ನಾಲ್ವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

Women paraded naked, four accused sent to police custody
Photo Credit : News Kannada

ಇಂಫಾಲ: ಇಬ್ಬರು ಮಹಿಳೆಯರ ಬೆತ್ತಲೆ ಮಹಿಳೆಯರ ಮೆರವಣಿಗೆಗೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಲಯ 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದೆ.

ಪ್ರಕರಣದ ತನಿಖಾ ಅಧಿಕಾರಿಯ ಮನವಿಯ ಮೇರೆಗೆ ತೌಬಲ್‌ನ ನ್ಯಾ ಯಾಲಾಯವು ನಾಲ್ವರನ್ನು ಜುಲೈ 31 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಣಿಪುರದ ತೌಬಲ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಏತನ್ಮಧ್ಯೆ, ತಲೆಮರೆಸಿಕೊಂಡಿರುವ ಆರೋಪಿ ಎಲ್. ಕಬಿಚಂದ್ರ (20) ಮನೆಗೆ ಶುಕ್ರವಾರ ಆಕ್ರೋಶಿತ ಗುಂಪೊಂದು ಬೆಂಕಿ ಹಚ್ಚಿದೆ. ಅಲ್ಲದೇ ಈ ವಿಡಿಯೋ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದೆ.

ಗೃಹ ಖಾತೆ ಕೂಡ ಹೊಂದಿರುವ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಘಟನೆ ಕುರಿತು ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದು ಬಂಧಿತ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ. ಈ ಹಂತದಲ್ಲಿ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು