ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತ ಟ್ವಿಟರ್ ಖಾತೆಯನ್ನು ಫಾಲೋ ಮಾಡುವವರ (ಹಿಂಬಾಲಿಸುವವರ) ಸಂಖ್ಯೆ 2.5 ಕೋಟಿಯಿಂತ ಹೆಚ್ಚಾಗಿದೆ. ಜಾಲತಾಣದಲ್ಲಿ ಯೋಗಿ ಆದಿತ್ಯನಾಥ್ ಅವರ ಜನಪ್ರಿಯತೆ ಹೆಚ್ಚಾಗುತ್ತಿದೆ. ಈ ಮೂಲಕ ಅವರು, ಟ್ವಿಟರ್ ಖಾತೆಯಲ್ಲಿ 2.5 ಕೋಟಿ ಅನುಯಾಯಿಗಳನ್ನು ಹೊಂದಿರುವ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2015ರ ಸೆಪ್ಟೆಂಬರ್ನಲ್ಲಿ ಯೋಗಿ ಆದಿತ್ಯನಾಥ್ ಅಧಿಕೃತ ಟ್ವಿಟರ್ ಹ್ಯಾಂಡಲ್ ಪ್ರಾರಂಭವಾಗಿತ್ತು. 8 ವರ್ಷಗಳಲ್ಲೇ ಇಷ್ಟರ ಮಟ್ಟಿಗೆ ಜನಪ್ರಿಯತೆ ಸಾಧಿಸಿದ್ದಾರೆ.
ಟ್ವಿಟರ್ನಲ್ಲಿ 25 ಮಿಲಿಯನ್ಗೂ ಹೆಚ್ಚು ಅನುಯಾಯಿಗಳೊಂದಿಗೆ, ಯೋಗಿ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ಹಿರಿಯ ನಾಯಕರನ್ನು ಒಳಗೊಂಡಿರುವ ಸಾಮಾಜಿಕ ವೇದಿಕೆಯ ಭಾಗವಾಗಿದ್ದಾರೆ. ಅಲ್ಲದೆ ಇವರು
ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಸಕ್ರಿಯ ಮುಖ್ಯಮಂತ್ರಿ ಮತ್ತು ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದಾರೆ.