ಚೀನಾ: ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರೊಬ್ಬರು ರೋಗಿಗೆ ಥಳಿಸಿರುವ ಘಟನೆ ಚೀನಾದಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ 82 ವರ್ಷದ ಮಹಿಳೆಯೊಬ್ಬರು ಕಣ್ಣಿನ ಸ್ತ್ರ ಚಿಕಿತ್ಸೆ ಸಮಯದಲ್ಲಿ ರೋಗಿ ಅವರದ್ದೇ ಸ್ಥಳೀಯ ಭಾಷೆಯಲ್ಲಿ ಮಾತನಾಡುತ್ತಿದ್ದರು, ಅದು ವೈದ್ಯರಿಗೆ ಅರ್ಥವಾಗುತ್ತಿರಲಿಲ್ಲ, ಕೋಪಗೊಂಡು ರೋಗಿಯ ತಲೆಗೆ ಮೂರು ಬಾರಿ ವೈದ್ಯ ಹೊಡೆದಿದ್ದಾರೆ. ಇದರಿಂದ ಎಡ ಕಣ್ಣಿನ ದೃಷ್ಟಿಯೇ ಹೋಗಿದೆ.
ವುಹಾನ್ನಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂದು ಆರಂಭದಲ್ಲೇ ಎಚ್ಚರಿಕೆ ನೀಡಿದ್ದ ವೈದ್ಯರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ಶಸ್ತ್ರ ಚಿಕಿತ್ಸೆ ಸಮಯದಲ್ಲಿ ಅರವಳಿಕೆಯಿಂದಾಗಿ ಮಂಪರಿದ್ದ ಕಾರಣ ರೋಗಿ ತಮ್ಮ ಕಣ್ಣುಗಳನ್ನು ಸ್ಪರ್ಶಿಸಲು ಪ್ರಯತ್ನಿಸುತ್ತಿದ್ದರು. ಸ್ಪರ್ಶಿಸಿದರೆ ಸೋಂಕಿಗೆ ಕಾರಣವಾಗಬಹುದು ಎಂದು ಹೊಡೆದಿದ್ದೇನೆ ಎಂದು ವೈದ್ಯರು ಹೇಳಿದ್ದಾರೆ.
ವೃದ್ಧೆಯೊಬ್ಬರ ಬಳಿ ಅಮಾನವೀಯವಾಗಿ ನಡೆದುಕೊಂಡಿದ್ದಕ್ಕೆ, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬಳಿಕ ಆಸ್ಪತ್ರೆ ಆಡಳಿತ ವೈದ್ಯರನ್ನು ಅಮಾನತುಗೊಳಿಸಿದೆ.