ಮೆಕ್ಸಿಕೋ: ಡಬಲ್ ಡೆಕ್ಕರ್ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಜನರು ಮೃತಪಟ್ಟಿದ್ದು ಮತ್ತು 22 ಮಂದಿಗೆ ಗಾಯಗಳಾಗಿರುವ ಘಟನೆ ವಾಯುವ್ಯ ಮೆಕ್ಸಿಕೋದ ಸಿನಾಲೋವಾ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಬಲ್ ಡೆಕ್ಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾದ ರಭಸಕ್ಕೆ ವಾಹನಗಳ ನಡುವೆ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ. ಇನ್ನು ಅಪಘಾತದ ನಂತರ ಸ್ಥಳದಲ್ಲೇ ಬಸ್ ಹೊತ್ತಿ ಉರಿದಿದ್ದು, ಸ್ಥಳಕ್ಕೆ ತುರ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.