ದುಬೈ : ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎರಡು ಡ್ರೋನ್‌ಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಈ ವೇಳೆ ಸಂಭವಿಸಿದ ಘಟನೆದಲ್ಲಿ ಭಾರತೀಯ ನಾಗರಿಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ದುಬೈ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.

ದಾಳಿಯಲ್ಲಿ “ಇಬ್ಬರು ಘಾನಾ ಪ್ರಜೆಗಳು ಮತ್ತು ಒಬ್ಬ ಬಾಂಗ್ಲಾದೇಶಿ ಪ್ರಜೆಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಒಬ್ಬ ಭಾರತೀಯ ಪ್ರಜೆಗೆ ಗಂಭೀರ ಗಾಯಗಳಾಗಿವೆ” ಎಂದು ಕಚೇರಿ ತಿಳಿಸಿದೆ. ಡ್ರೋನ್‌ಗಳನ್ನು ತಡೆದ ನಂತರ ಕೂಡ ವಿಮಾನ ಸಂಚಾರ ಸಾಮಾನ್ಯವಾಗಿ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್ ತನ್ನ ಭೂಭಾಗದ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ದಾಳಿಗೆ ಪ್ರತಿಕ್ರಿಯೆಯಾಗಿ ಯುನೈಟೆಡ್ ಅರಬ್ ಎಮಿರೇಟ್ಸ್, ಬಹ್ರೇನ್, ಕತಾರ್ ಸೇರಿದಂತೆ ಹಲವು ಗಲ್ಫ್ ದೇಶಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ಮೂಲಸೌಕರ್ಯಕ್ಕೆ ಹಾನಿ ಉಂಟಾಗಿ, ತೈಲ ಉತ್ಪಾದನೆಗೂ ವ್ಯತ್ಯಯ ಉಂಟಾಗಿದೆ.